ಪುನೀತ್ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೆಟ್ ; ಕಿಡಿಗೇಡಿಗಳ ಮೇಲೆ ನಟ ಜಗ್ಗೇಶ್ ಆಕ್ರೋಶ
ಗುರುವಾರ, 5 ಜುಲೈ 2018 (13:24 IST)
ಬೆಂಗಳೂರು : ಇತ್ತೀಚೆಗೆ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೆಟ್ ಆಗಿತ್ತು. ಅದೇರೀತಿ ಇದೀಗ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಫೇಕ್ ಟ್ವಿಟ್ಟರ್ ಅಕೌಂಟ್ ಕ್ರಿಯೇಟ್ ಮಾಡಿರುವ ಕಿಡಿಗೇಡಿಯೊಬ್ಬ ಸಿಕ್ಕಿಬಿದ್ದಿದ್ದು, ಈ ಬಗ್ಗೆ ನಟ ನವರಸನಾಯಕ ಜಗ್ಗೇಶ್ ಅವರು ಮಾಹಿತಿ ನೀಡಿದ್ದಾರೆ.
ಈ ಕಿಡಿಗೇಡಿ ಕ್ರಿಯೆಟ್ ಮಾಡಿದ್ದ ಫೇಕ್ ಅಕೌಂಟ್ ನ್ನು ಪುನೀತ್ ಅಫೀಶಿಯಲ್ ಆಕೌಂಟ್ ಎಂದು ಸಾಕಷ್ಟು ನಟ ನಟಿಯರು ಫೋಟೋಗಳನ್ನು ಟ್ಯಾಗ್ ಮಾಡುತ್ತಿದ್ದರು. ಅಲ್ಲದೇ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಅದು ಪುನೀತ್ ಅವರ ಅಫೀಶಿಯಲ್ ಅಕೌಂಟ್ ಎಂದು ತಿಳಿದು ಫಾಲೋ ಮಾಡುತ್ತಿದ್ದರು.
ಈ ಬಗ್ಗೆ ನಟ ಜಗ್ಗೇಶ್ ಅವರು, ’ಸೆಲಿಬ್ರಿಟಿಗಳ ಬದುಕು ಎಷ್ಟು ಕಷ್ಟ ಅನ್ನೋದು ಇದಕ್ಕೆ. ಕಷ್ಟಪಟ್ಟು ನೋವು ಅಪಮಾನ ಸಹಿಸಿ ಬೆಳೆದ ಮೇಲೆ ಇಂತಹ ಸಮಯ ಸಾಧಕರ ಆಗಮನ ಶ್ರಮವಿಲ್ಲದೆ ಸಾಧಕನ ಹೆಸರು ಬಳಸಿ ಬೆಳೆಯಲು. ಸ್ವತಃ ಪುನೀತನೆ ಹೇಳಬೇಕಾಯಿತು ಅಭಿಮಾನಿಗಳಿಗೆ. ಜಾಲತಾಣ ದುರ್ಬಳಕೆ ಅಂದರೆ ಇದೆ ಅದಕ್ಕೆ ಜನ ಯಾರನ್ನು ನಂಬೋಲ್ಲಾ. ಇದಕ್ಕಿಂತ ಮೈಬಗ್ಗಿಸಿ ದುಡಿದು ತಿನ್ನಿ ಸ್ವಾಭಿಮಾನದಿಂದ’ ಎಂದು ಟ್ವೀಟ್ ಮಾಡಿ ಕಿಡಿಗೇಡಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ