ಜೇಮ್ಸ್ ಟೀಸರ್ ಗೆ ಮುಹೂರ್ತ ಸೆಟ್ಟಾಯ್ತು

ಶನಿವಾರ, 5 ಫೆಬ್ರವರಿ 2022 (17:02 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕರಾಗಿ ಅಭಿನಯಿಸಿದ್ದ ಕೊನಯ ಸಿನಿಮಾ ಜೇಮ್ಸ್ ಟೀಸರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದೆ.

ಫೆಬ್ರವರಿ 11 ರಂದು ಚಿತ್ರದ ಟೀಸರ್ ಬಿಡುಗಡೆಯಾಗುವುದು ಖಚಿತವಾಗಿದೆ. ಮೊನ್ನೆಯಷ್ಟೇ ಜೇಮ್ಸ್ ಸಿನಿಮಾದ ಪೋಸ್ಟರ್ ಒಂದನ್ನು ಚಿತ್ರ ಬಿಡುಗಡೆ ಮಾಡಿತ್ತು. ಈ ಪೋಸ್ಟರ್ ಗೇ ಅಭಿಮಾನಿಗಳಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇದೀಗ ಟೀಸರ್ ಬಗ್ಗೆಯೂ ಅದ ರೀತಿ ಕ್ರೇಜ್ ಇದೆ. ಫೆಬ್ರವರಿ 11 ರಂದು ಬೆಳಿಗ್ಗೆ 11.11 ಕ್ಕೆ ಟೀಸರ್ ಬಿಡುಗಡೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ