ಪುಷ್ಪ 2 ರಿಲೀಸ್ ದಿನಾಂಕ ಬಹಿರಂಗ

ಸೋಮವಾರ, 11 ಸೆಪ್ಟಂಬರ್ 2023 (19:45 IST)
ಹೈದರಾಬಾದ್: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ 2 ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಸ್ವತಃ ಅಲ್ಲು ಅರ್ಜುನ್ ಬಿಡುಗಡೆ ದಿನಾಂಕ ಬಹಿರಂಗಪಡಿಸಿದ್ದಾರೆ.

ಮುಂದಿನ ವರ್ಷ ಅಂದರೆ 2024 ರ ಆಗಸ್ಟ್ 15 ರಂದು ಪುಷ್ಪ 2 ಸಿನಿಮಾ ರಿಲೀಸ್ ಆಗುತ್ತಿದೆ.  ಇದುವರೆಗೆ ರಿಲೀಸ್ ದಿನಾಂಕದ ಬಗ್ಗೆ ಹಲವು ಊಹಾಪೋಹಗಳಿದ್ದವು. ಈಗ ಸ್ವತಃ ಚಿತ್ರತಂಡವೇ ಅಧಿಕೃತ ಪ್ರಕಟಣೆ ನೀಡಿದೆ.

ಈಗಾಗಲೇ ಪುಷ್ಪ 2 ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಇತ್ತೀಚೆಗಷ್ಟೇ ಸೆಟ್ ನ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ