ಮುಂಬೈ: ಬಹುನಿರೀಕ್ಷಿತ ಕಿಂಗ್ ಸಿನಿಮಾ ಶೂಟಿಂಗ್ ವೇಳೆ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಅವರು ಗಾಯಗೊಂಡಿದ್ದಾರೆ.
ಸಿನಿಮಾದ ಸಾಹಸ ಸನ್ನಿವೇಶ ಚಿತ್ರೀಕರಣ ಮಾಡುವಾಗ ಶಾರುಖ್ ಖಾನ್ ಬೆನ್ನಿಗೆ ಗಾಯಗೊಂಡಿದ್ದಾರೆ. ಮುಂಬೈನ ಚಿತ್ರೀಕರಣದ ಸ್ಟುಡಿಯೋದಲ್ಲಿ ಘಟನೆ ನಡೆದಿದೆ.
ಈ ಸಿನಿಮಾ ಶೂಟಿಂಗ್ ಇತ್ತೀಚೆಗೆ ಮುಂಬೈನ ಗೋಲ್ಡನ್ ಟೊಬ್ಯಾಕೋ ಸ್ಟುಡಿಯೋದಲ್ಲಿ ನಡೆಯುತ್ತಿತ್ತು. ಸದ್ದಿಲ್ಲದೆ ಶೂಟ್ ಮಾಡಲಾಗುತ್ತಿತ್ತು. ಈ ವೇಳೆ ಶಾರುಖ್ ಖಾನ್ ಅವರು ಸ್ಟಂಟ್ ಮಾಡುತ್ತಿದ್ದರು. ಆಗ ಅವರಿಗೆ ಗಾಯವಾಗಿದೆ.
ಶಾರುಖ್ ಖಾನ್ ಅವರು 2023ರಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟರು. ಪಠಾಣ್, ಜವಾನ್ ಹಾಗೂ ಡಂಕಿ ಸಿನಿಮಾಗಳು ಹಿಟ್ ಆದವು. ಆ ಬಳಿಕ ಶಾರುಖ್ ಖಾನ್ ಯಾವುದೇ ಸಿನಿಮಾನ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೆ, ಅವರು ಕಿಂಗ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಅನ್ನೋದು ಗೊತ್ತಾಗಿದೆ.
ಸಿದ್ಧಾರ್ಥ್ ಆನಂದ್ ನಿರ್ದೇಶನದಲ್ಲಿ ಕಿಂಗ್ ಚಿತ್ರ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಅಭಿಷೇಕ್ ಬಚ್ಚನ್, ಜೈದೀಪ್ ಅಹ್ಲಾವತ್, ಅನಿಲ್ ಕಪೂರ್ ಮತ್ತು ಅಭಯ್ ವರ್ಮಾ ಕೂಡ ನಟಿಸಿದ್ದಾರೆ.
ಶಾರುಖ್‌ಗೆ ಗಂಭೀರ ಪೆಟ್ಟಾಗಿಲ್ಲ. ಚೇತರಿಸಿಕೊಳ್ಳುತ್ತಿದ್ದಾರೆ. ಕಿಂಗ್ ಖಾನ್ ಗಾಯಗೊಂಡಿರುವುದರಿಂದ ಸಿನಿಮಾ ಚಿತ್ರೀಕರಣದಲ್ಲಿ ವಿಳಂಬವಾಗಲಿದೆ. ಚಿತ್ರೀಕರಣದ ವೇಳೆ ಮಗಳು ಕೂಡ ಭಾಗಿಯಾಗಿದ್ದರು.