‘ರಾಧೆಶ್ಯಾಮ್’ ಚಿತ್ರದ ಬಿಡುಗಡೆಯ ಬಗ್ಗೆ ತೀವ್ರ ಒತ್ತಡಕ್ಕೆ ಸಿಲುಕಿದ ಚಿತ್ರತಂಡ

ಬುಧವಾರ, 10 ಫೆಬ್ರವರಿ 2021 (06:48 IST)
ಹೈದರಾಬಾದ್ : ಟಾಲಿವುಡ್ ಸ್ಟಾರ್ ನಟ ಪ್ರಭಾಸ್, ನಟಿ ಪೂಜಾ ಹೆಗ್ಡೆ ಅಭಿನಯದ ಲವ್ ಸ್ಟೋರಿ ಚಿತ್ರ ‘ರಾಧೆಶ್ಯಾಮ್’ ಚಿತ್ರದ ಬಿಡುಗಡೆಯ ದಿನಾಂಕವನ್ನು ನಿಗದಿ ಮಾಡುವ ವಿಚಾರದಲ್ಲಿ ಚಿತ್ರತಂಡ ತೀವ್ರ ಒತ್ತಡಕ್ಕೆ ಸಿಲುಕಿದೆ.

ಈಗಾಗಲೇ ಚಿತ್ರದ ಟೀಸರ್ ಬಿಡುಗಡೆಯಲ್ಲಿ ವಿಳಂಬವಾಗಿದ್ದು ಕೊನೆಗೂ ಪ್ರೇಮಿಗಳ ದಿನದಂದು ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಘೋಷಿಸಲಾಗಿದೆ. ಹಾಗಾಗಿ ಪ್ರಭಾಸ್ ಅಭಿಮಾನಿಗಳು ಚಿತ್ರ ಬಿಡುಗಡೆಯ ದಿನಾಂಕವನ್ನು ಹೇಳುವಂತೆ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಚಿತ್ರವನ್ನು ಜುಲೈ 30ರಂದು ಬಿಡುಗಡೆ ಮಾಡುವುದಾಗಿ ಹೇಳಲಾಗಿದೆ. ಆದರೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ