ತೆಲುಗು ಸ್ಟಾರ್ ನಟನ ಜೊತೆ ನಟಿಸುವ ಅವಕಾಶ ಪಡೆದ ನಟಿ ರಾಧಿಕಾ ಕುಮಾರಸ್ವಾಮಿ

ಶನಿವಾರ, 18 ಆಗಸ್ಟ್ 2018 (06:36 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಟಿ ರಾಧಿಕಾ ಕುಮಾರಸ್ವಾಮಿ ಅವರು ಈಗ ಟಾಲಿವುಡ್ ನ ಸ್ಟಾರ್ ನಟರೊಬ್ಬರ ಜೊತೆ ನಟಿಸುವ ಅವಕಾಶವನ್ನು ಪಡೆದುಕೊಂಡಿದ್ದಾರಂತೆ.


ಈ ಹಿಂದೆ ಸ್ಯಾಂಡಲ್ ವುಡ್ ನಲ್ಲಿ ಮಿಂಚಿ ಮರೆಯಾದ ನಟಿ ರಾಧಿಕಾ ಕುಮಾರಸ್ವಾಮಿ ಅವರು ನಂತರ ಮದುವೆಯಾಗಿ ಒಂದು ಮಗುವಿನ ತಾಯಿಯಾದ ನಂತರ ಮತ್ತೆ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇವರು ಸಿನಿಮಾ ರಂಗದಲ್ಲಿ ಮೊದಲಿನಷ್ಟು ಸಕ್ರೀಯರಾಗಿಲ್ಲವಾದರೂ ಕೂಡ ಸದ್ಯಕ್ಕೆ ಕನ್ನಡದಲ್ಲಿ ಕೆಲವೊಂದು ಸಿನಿಮಾಗಳಲ್ಲಿ ಕನ್ನಡದ ಸ್ಟಾರ್ ನಟರ ಜೊತೆ ನಟಿಸುತ್ತಿದ್ದಾರೆ.


ಆದರೆ ಇದೀಗ ಇವರನ್ನು ತೆಲುಗಿನ ಸ್ಟಾರ್ ನಟ ಮೆಗಾಸ್ಟಾರ್ ಚಿರಂಜೀವಿ ಅವರ 152 ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲಾಗಿದ್ಯಂತೆ. ತೆಲುಗಿನ ಸ್ಟಾರ್ ಡೈರೆಕ್ಟರ್ ಕೊರಟಾಲಶಿ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಚಿರಂಜೀವಿ ಅವರಿಗೆ ನಾಯಕಿಯಾಗಿ ರಾಧಿಕಾ ನಟಿಸುತ್ತಿದ್ದಾರಂತೆ. ಸದ್ಯದಲ್ಲೇ ಈ ಚಿತ್ರ ಸೆಟ್ಟೇರಲಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ