ಕೊರೋನಾ ಲಸಿಕೆ ಪಡೆದುಕೊಂಡ ನಟ ರಾಘವೇಂದ್ರ ರಾಜಕುಮಾರ್

ಶನಿವಾರ, 13 ಮಾರ್ಚ್ 2021 (11:14 IST)
ಬೆಂಗಳೂರು: ನಟ, ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ. ಇದು ಅವರ ಮೊದಲ ಹಂತದ ಕೊರೋನಾ ಲಸಿಕೆಯಾಗಿದ್ದು, ಇನ್ನೊಂದು ಡೋಸ್ ಸದ್ಯದಲ್ಲೇ ಪಡೆಯಲಿದ್ದಾರೆ.


ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಅವರು ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ನಮ್ಮ ನಾಯಕರು, ಸರ್ಕಾರಗಳು ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳಿದ್ದಾರೆ. ಹೀಗಾಗಿ ನಾನೂ ಲಸಿಕೆ ಹಾಕಿಸಿಕೊಂಡಿದ್ದೇನೆ. ನೀವೂ ಲಸಿಕೆ ಹಾಕಿಸಿಕೊಳ್ಳಿ ಎಂದು ರಾಘವೇಂದ್ರ ರಾಜಕುಮಾರ್ ಸಂದೇಶ ನೀಡಿದ್ದಾರೆ.

60 ವರ್ಷ ಮೇಲ್ಪಟ್ಟ ಮತ್ತು 45 ವರ್ಷ ಮೇಲ್ಪಟ್ಟ ಕೆಲವು ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳು ಲಸಿಕೆ ಪಡೆಯಲು ಸರ್ಕಾರ ಕರೆ ಕೊಟ್ಟಿದೆ. ಇತ್ತೀಚೆಗಷ್ಟೇ ರಾಘವೇಂದ್ರ ರಾಜಕುಮಾರ್ ಹೃದಯ ಬಡಿತದ ಏರುಪೇರಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೊಳಗಾಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ