ಮ್ಯಾಚ್ ಫಿಕ್ಸಿಂಗ್ ನಲ್ಲೂ ರಾಗಿಣಿ? ಸಿಸಿಬಿ ಅಧಿಕಾರಿಗಳಿಂದ ಇಂದು ವಿಚಾರಣೆ

ಭಾನುವಾರ, 6 ಸೆಪ್ಟಂಬರ್ 2020 (09:29 IST)
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಗಿಣಿ ದ್ವಿವೇದಿ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲೂ ಭಾಗಿಯಾಗಿದ್ದಾರಾ? ಈ ಬಗ್ಗೆ ಇಂದು ವಿಚಾರಣೆ ನಡೆಯಲಿದೆ.


ನಿನ್ನೆ ಬೆನ್ನು ನೋವಿನ ನೆಪ ಹೇಳಿ ವಿಚಾರಣೆ ತಪ್ಪಿಸಿಕೊಂಡಿದ್ದ ರಾಗಿಣಿ ವಿಚಾರಣೆ ಇಂದು ಸಿಸಿಬಿ ಕಚೇರಿಯಲ್ಲಿ ನಡೆಯಲಿದೆ. ಈ ವೇಳೆ ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ನಡೆದ ಫಿಕ್ಸಿಂಗ್ ಪ್ರಕರಣಕ್ಕೂ ರಾಗಿಣಿಗೂ ಸಂಬಂಧವಿದೆಯೇ? ಆ ಪ್ರಕರಣದಲ್ಲಿ ರಾಗಿಣಿ ಭಾಗಿಯಾಗಿದ್ದಾರಾ ಎಂದು ಕೆಪಿಎಲ್ ಫಿಕ್ಸಿಂಗ್ ಪ್ರಕರಣದ ವಿಚಾರಣೆ ಮಾಡುತ್ತಿರುವ ತನಿಖಾಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ