ಪುನೀತ್ ನಿವಾಸಕ್ಕೆ ಭೇಟಿ ಕೊಟ್ಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ನಿನ್ನೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಪುನೀತ್ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದರು.
ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಅಶ್ವಿನಿ ಪುನೀತ್ ಹಾಗೂ ಮಗಳು ವಂದಿತಾ ಜೊತೆ ಮಾತುಕತೆ ನಡೆಸಿದರು. ಈ ವೇಳೆ ರಾಘವೇಂದ್ರ ರಾಜ್ ಕುಮಾರ್ ಕೂಡಾ ಉಪಸ್ಥಿತರಿದ್ದರು.