ದುಲ್ಕರ್ ಸಲ್ಮಾನ್ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ ರಾಜ್ ಬಿ ಶೆಟ್ಟಿ

ಶನಿವಾರ, 19 ಆಗಸ್ಟ್ 2023 (09:10 IST)
Photo Courtesy: Twitter
ಬೆಂಗಳೂರು: ಕನ್ನಡದ ಪ್ರತಿಭಾವಂತ ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ ಈಗ ಮಲಯಾಳಂ ಸಿನಿಮಾವೊಂದನ್ನು ನಿರ್ದೇಶಿಸಲಿದ್ದಾರಂತೆ. ಅದೂ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ ಎಂಬ ಸುದ್ದಿ ಬಂದಿದೆ.

ರಾಜ್ ಬಿ ಶೆಟ್ಟಿ ಇದೀಗ ಟೋಬಿ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ಮಲಯಾಳಂನಲ್ಲೂ ಒಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಇದೀಗ ದುಲ್ಕರ್ ಸಲ್ಮಾನ್ ಹೋಂ ಬ್ಯಾನರ್ ನಲ್ಲಿ ಮೂಡಿಬರಲಿರುವ ಸಿನಿಮಾಗೆ ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡಲಿದ್ದಾರಂತೆ. ಈ ವಿಚಾರವನ್ನು ಖುದ್ದು ದುಲ್ಕರ್ ಅವರೇ ಬಹಿರಂಗಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ