ದರ್ಶನ್ ‘ಒಡೆಯರ್’ ಚಿತ್ರದ ಟೈಟಲ್ ಗೆ ಒಪ್ಪಿಗೆ ನೀಡಿದ ರಾಜಮಾತೆ ಪ್ರಮೋದಾದೇವಿ
ಬುಧವಾರ, 1 ಆಗಸ್ಟ್ 2018 (06:42 IST)
ಬೆಂಗಳೂರು : ನಟ ದರ್ಶನ್ ಅಭಿನಯದ `ಒಡೆಯರ್’ ಚಿತ್ರದ ಟೈಟಲ್ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿದ್ದು, ಈ ಬಗ್ಗೆ ಇದೀಗ ಒಡೆಯರ್ ಮನೆತನದ ರಾಜಮಾತೆ ಪ್ರಮೋದಾದೇವಿ ಪ್ರತಿಕ್ರಿಯೆ ನೀಡಿದ್ದಾರೆ.
ಇತ್ತೀಚೆಗೆ ನಟ ದರ್ಶನ ಅಭಿನಯದ `ಒಡೆಯರ್’ ಚಿತ್ರದ ಹೆಸರು ಬದಲಾವಣೆ ಮಾಡಬೇಕೆಂದು ಎರಡು ಸಂಘಟನೆಯ ಸದಸ್ಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು, ‘ಚಿತ್ರಕ್ಕೆ ಒಡೆಯರ್ ಎಂದು ಹೆಸರಿಟ್ಟಿರಿವುದಕ್ಕೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಈ ಚಿತ್ರದಲ್ಲಿ ನಮ್ಮ ಮನೆತನದ ಬಗ್ಗೆ ಚಿತ್ರೀಕರಿಸಿದರೆ ಆಕ್ಷೇಪ ಮಾಡುವುದಾಗಿ ಹೇಳಿದ್ದಾರೆ.
ಒಡೆಯರ್ ಹೆಸರು ನಮಗೆ ಬಳುವಳಿಯಾಗಿ ಬಂದದ್ದು. ಒಡೆಯರ್ ಹೆಸರು ತುಂಬಾ ಜನ ಇಟ್ಟುಕೊಂಡಿದ್ದಾರೆ. ಆದರೆ ನಮ್ಮ ಮನೆತನಕ್ಕೆ ಸಂಬಂಧಪಟ್ಟಂತೆ ಬಂದರೆ ಅದಕ್ಕೆ ಆಕ್ಷೇಪವಿದೆ. ಈ ವಿಚಾರದಲ್ಲಿ ಒಡೆಯರ್ ಅಭಿಮಾನಿಗಳು ಕೊಟ್ಟಿರುವ ದೂರಿನ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ