ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜಿನಿಕಾಂತ್ ರಾಜಕೀಯ ಪ್ರವೇಶಕ್ಕೆ ಕಾಲ ಕೂಡಿಬಂದಂತೆ ಕಾಣುತ್ತಿದೆ. ರಜಿನಿಕಾಂತ್ ರಾಜಕೀಯ ಪ್ರವೇಶ ಕುರಿತಂತೆ ಎದ್ದಿದ್ದ ಊಹಾಪೋಹಗಳಿಗೆ ಡಿಸೆಂಬರ್`ನಲ್ಲಿ ತೆರೆ ಬೀಳುವ ಸಾಧ್ಯತೆ ಇದೆ. ಬರುತ್ತಿರುವ ವದರಿಗಳ ಪ್ರಕಾರ, ಡಿಸೆಂಬರ್ 12ರಂದು ತಮ್ಮ ಹುಟ್ಟುಹಬ್ಬದ ದಿನ ರಜಿನಿಕಾಂತ್ ರಾಜಕೀಯ ಪ್ರವೇಶದ ಗೋಷಣೆ ಮಾಡ್ತಾರಂತೆ.
ರಜಿನಿಕಾಂತ್ ಅವರ ಬಹುದಿನಗಳ ಗೆಳೆಯ ರಾಜ್ ಬಹದ್ದೂರ್, ರಜಿನಿ ರಾಜಕೀಯ ಪ್ರವೇಶದ ಸುದ್ದಿಯನ್ನ ತಳ್ಳಿಹಾಕಲು ಸಾಧ್ಯವಿಲ್ಲ. ನನ್ನ ಜೊತೆಯೂ ಈ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಕಳೆದ ಬಾರಿ ರಜಿನಿಕಾಂತ್ ಬೆಂಗಳೂರಿಗೆ ಬಂದಿದ್ದಾಗ ನನ್ನ ಜೊತೆ 12 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಜಯಲಲಿತಾ ನಿಧನದ ಬಳಿಕ ತಮಿಳುನಾಡಿನಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ. ಜನರ ಹಿತ ಕಾಯುವ ದೃಷ್ಟಿಯಿಂದ ರಜಿನಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ರಾಜ್ ಬಹದ್ದೂರ್ ಹೇಳಿರುವುದಾಗಿ ವರದಿಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ