ರಾಜು ತಾಳಿಕೋಟೆ ಇನ್ನಿಲ್ಲ : ಇಹ ಲೋಕಕ್ಕೆ ತೆರೆ ಎಳೆದ ರಂಗಕರ್ಮಿ

Sampriya

ಸೋಮವಾರ, 13 ಅಕ್ಟೋಬರ್ 2025 (18:59 IST)
Photo Credit X
ಉಡುಪಿ: ರಂಗಭೂಮಿ ಕಲಾವಿದ ಹಾಗೂ ಕನ್ನಡದ ಪೋಷಕ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾ ಶೂಟಿಂಗ್‌ಗೆ ಎಂದು ಉಡುಪಿಗೆ ಬಂದಿದ್ದ ವೇಳೆ ರಾಜು ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.  

ಇನ್ನೂ ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 


ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದವರಾಗಿರುವ ಇವರ ಮೊದಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟೆ. ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದರು. 

ಅನಾರೋಗ್ಯದಿಂದಾಗಿ ನಾಟಕ ಹಾಗೂ ಸಿನಿಮಾ ಚಟುವಟಿಕೆಗಳಿಂದ ದೂರ ಉಳಿದಿದ್ದರು.  ರಾಜು ತಾಳಿಕೋಟೆಯವರ ಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.

ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ ಚಿತ್ರದ ಅಭಿನಯಕ್ಕೆ ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಬಳಿಕ ಇವರು ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಭಾಷಾ ಹಾಗೂ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಬಿಗ್‌ ಬಾಸ್‌ ಸೀಸನ್‌ 7ರಲ್ಲಿ ಅವರು ಸ್ಪರ್ಧಿಯಾಗಿ ಭಾಗವಹಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ