ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ರಿಲೀಸ್ ಯಾವಾಗ ಗೊತ್ತಾ?

ಬುಧವಾರ, 9 ಅಕ್ಟೋಬರ್ 2019 (07:35 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ಸಿನಿಮಾವೊಂದು ಬಿಡುಗಡೆಯಾಗದೇ ತುಂಬಾ ದಿನಗಳಾಗಿವೆ ಎಂದು ಕಾಯುತ್ತಿದ್ದ ಪ್ರೇಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.


ರಕ್ಷಿತ್ ಅಭಿನಯದ ಬಹುನಿರೀಕ್ಷಿತ  ಅವನೇ ಶ್ರೀಮನ್ನಾರಾಯಣ ಸಿನಿಮಾ ಇದೇ ವರ್ಷ ಡಿಸೆಂಬರ್ ನಲ್ಲಿ ಬಿಡುಗಡೆಯಾಗುವುದಾಗಿ ಚಿತ್ರತಂಡ ಘೋಷಿಸಿದೆ.

ಈಗಾಗಲೇ ಬಹುಭಾಷೆಗಳಲ್ಲಿ ಚಿತ್ರ ಬಿಡುಗಡೆಗೆ ಚಿತ್ರತಂಡ ಪ್ರಚಾರ ಶುರು ಮಾಡಿಕೊಂಡಿದೆ. ಎಲ್ಲಾ ಅಂದುಕೊಂಡ ಹಾಗೆ ಆಗಿದ್ದರೆ ಈಗಾಗಲೇ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಮುಂದೂಡಿಕೆಯಾಗುತ್ತಲೇ ಇತ್ತು. ಕೊನೆಗೂ ಡಿಸೆಂಬರ್ ನಲ್ಲಿ ಬಿಡುಗಡೆ ಎಂದು ರಕ್ಷಿತ್ ಶೆಟ್ಟಿ ಘೋಷಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ