ರಕ್ಷಿತ್ ಶೆಟ್ಟಿ ಸಪ್ತಸಾಗರದಾಚೆ ಎಲ್ಲೊ ರಿಲೀಸ್ ಡೇಟ್ ಔಟ್

ಗುರುವಾರ, 15 ಜೂನ್ 2023 (10:09 IST)
Photo Courtesy: Twitter
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಪ್ತಸಾಗರದಾಚೆ ಎಲ್ಲೊ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ.

ಈ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್ ಆಗಲಿದೆ. ಇದೇ ಮೊದಲ ಬಾರಿಗೆ ಏಕಕಾಲಕ್ಕೆ ಎರಡು ಪಾರ್ಟ್ ಬಿಡುಗಡೆಯಾಗುತ್ತಿದೆ. ಮೊದಲನೆಯ ಭಾಗ ಸೆಪ್ಟೆಂಬರ್ 1 ರಂದು ತೆರೆಗೆ ಬರಲಿದೆ.

ಅದಾಗಿ ಒಂದು ತಿಂಗಳ ಬಳಿಕ ಅಂದರೆ ಅಕ್ಟೋಬರ್ 20 ರಂದು ಎರಡನೇ ಭಾಗ ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ರಕ್ಷಿತ್ ಎರಡು ವಿಭಿನ್ನ ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಹೇಮಂತ್ ರಾವ್ ನಿರ್ದೇಶನವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ