ಕೊನೆಗೂ ಗುಡ್ ನ್ಯೂಸ್ ಕೊಟ್ಟ ರಾಮ್ ಚರಣ್ ತೇಜ್-ಉಪಾಸನಾ ದಂಪತಿ

ಮಂಗಳವಾರ, 13 ಡಿಸೆಂಬರ್ 2022 (09:00 IST)
Photo Courtesy: Twitter
ಹೈದರಾಬಾದ್: ಟಾಲಿವುಡ್ ನಟ ರಾಮ್ ಚರಣ್ ತೇಜ್ ಮತ್ತು ಉಪಾಸನಾ ದಂಪತಿ ಕೊನೆಗೂ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ರಾಮ್ ಚರಣ್ ಹಾಗೂ ಉಪಾಸನಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವಿಚಾರವನ್ನು ರಾಮ್ ಚರಣ್ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ರಾಮ್ ಚರಣ್-ಉಪಾಸನಾ ಮದುವೆಯಾಗಿ 10 ವರ್ಷಗಳಾಗಿವೆ. ಇಷ್ಟು ದಿನ ಗುಡ್ ನ್ಯೂಸ್ ಗಾಗಿ ಅಭಿಮಾನಿಗಳು ಕಾಯುತ್ತಲೇ ಇದ್ದರು. ಈಗ ಕೊನೆಗೂ ಅದು ನಿಜವಾಗುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಕುಟುಂಬಕ್ಕೆ ಮತ್ತೊಂದು ಕುಡಿಯ ಆಗಮನವಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ