ಧ್ರುವ ಸರ್ಜಾ ‘ಕೆಡಿ’ ಟೀಂ ಸೇರಿಕೊಂಡ ರಮೇಶ್ ಅರವಿಂದ್: ಲುಕ್ ನೋಡಿ ಶಾಕ್!

ಬುಧವಾರ, 1 ನವೆಂಬರ್ 2023 (17:27 IST)
Photo Courtesy: Twitter
ಬೆಂಗಳೂರು: ನಟ ರಮೇಶ್ ಅರವಿಂದ್ ಹೆಚ್ಚಾಗಿ ಸಾಫ್ಟ್, ಸರಳ ಪಾತ್ರಗಳನ್ನು ಮಾಡಿ ಗಮನ ಸೆಳೆದವರು. ಆದರೆ ಇದೇ ಮೊದಲ ಬಾರಿಗೆ ಅವರು ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ರಾಜ್ಯೋತ್ಸವ ಪ್ರಯುಕ್ತ ಜೋಗಿ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಾಯಕರಾಗಿರುವ ಕೆಡಿ ಸಿನಿಮಾದ ಪೋಸ್ಟರ್ ಒಂದು ಬಿಡುಗಡೆಯಾಗಿದೆ. ಈ ಪೋಸ್ಟರ್ ಮೂಲಕ ನಟ ರಮೇಶ್ ಅರವಿಂದ್ ಚಿತ್ರತಂಡದ ಭಾಗವಾಗಿರುವುದಾಗಿ ಘೋಷಣೆ ಮಾಡಲಾಗಿದೆ.

ಪೋಸ್ಟರ್ ನಲ್ಲಿ ಉದ್ದ ಕೂದಲು ಬಿಟ್ಟುಕೊಂಡು ಕೈಯಲ್ಲಿ ಲಾಂಗ್ ಹಿಡಿದುಕೊಂಡು ರಮೇಶ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಹೊಸ ಲುಕ್ ಗೆ ಅಭಿಮಾನಿಗಳು ಶಾಕ್ ಆಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ