ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

Krishnaveni K

ಸೋಮವಾರ, 28 ಜುಲೈ 2025 (12:27 IST)

ಬೆಂಗಳೂರು: ಡಿ ಬಾಸ್ ಫ್ಯಾನ್ಸ್ ಮತ್ತು ರಮ್ಯಾ ನಡುವಿನ ಜಗಳ ತಾರಕಕ್ಕೇರಿದ್ದು, ಈಗ ರಕ್ಷಿತಾ ಪ್ರೇಮ್ ಕೂಡಾ ಇದಕ್ಕೆ ಎಂಟ್ರಿ ಕೊಟ್ಟರಾ ಎಂಬ ಅನುಮಾನ ಮೂಡಿದೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಲ್ಲಿ ನ್ಯಾಯ ಸಿಗಬಹುದು ಎಂಬ ವಿಶ್ವಾಸವಿದೆ ಎಂದು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ ರಮ್ಯಾಗೆ ಸೋಷಿಯಲ್ ಮೀಡಿಯಾದಲ್ಲಿ ಇನ್ನಿಲ್ಲದಂತೆ ಕಾಮೆಂಟ್ ಮಾಡಿ ಬೈಗುಳ ಸುರಿಮಳೆಗೈಯುತ್ತಿದ್ದಾರೆ.

ಇದೇ ಕಾರಣಕ್ಕೆ ರಮ್ಯಾ ಮತ್ತೊಂದು ಪೋಸ್ಟ್ ಹಾಕಿ ಇದೇ ಕಾರಣಕ್ಕೆ ರೇಣುಕಾಸ್ವಾಮಿ ಪ್ರಕರಣದಲ್ಲಿ ಆತನ ಕುಟುಂಬದವರಿಗೆ ನ್ಯಾಯ ಸಿಗಬೇಕು ಎಂದಿದ್ದರು. ಇನ್ನು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ನೀಡುತ್ತಿರುವ ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ಸೈಬರ್ ಕ್ರೈಂಗೆ ದೂರು ನೀಡಲು ಸಜ್ಜಾಗಿದ್ದಾರೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡಾ ರಮ್ಯಾ ವಿರುದ್ಧ ದೂರು ಕೊಡಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಹೀಗಿರುವಾಗ ಒಂದು ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವುದಕ್ಕೆ ವಿಜಯಲಕ್ಷ್ಮಿ ಸಿಟ್ಟಾಗಿದ್ದಾರೆ ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆ ನಡುವೆ ದರ್ಶನ್ ಸ್ನೇಹಿತೆ ರಕ್ಷಿತಾ ಪ್ರೇಮ್ ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿದ್ದು ಜನರ ಮಾನಸಿಕ ಸ್ಥಿತಿಗತಿಯನ್ನು ನೋಡಲು ಸಾಧ್ಯವಿಲ್ಲ. ದಯೆಯಿರಲಿ’ ಎಂದು ಪೋಸ್ಟ್ ಮಾಡಿದ್ದಾರೆ. ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದು ಇದರಲ್ಲಿ ನಾನು ನಿಜವಾಗಿಯೂ ಏನನ್ನು ವೈರಲ್ ಆಗಬೇಕೆಂದು ಬಯಸುತ್ತೇನೆ ಎಂಬರ್ಥದ ಪೋಸ್ಟ್ ಹಾಕಿದ್ದಾರೆ. ಹೀಗಾಗಿ ರಮ್ಯಾಗೆ ಪರೋಕ್ಷವಾಗಿ ರಕ್ಷಿತಾ ಟಾಂಗ್ ಕೊಟ್ಟರಾ ಎಂಬ ಅನುಮಾನ ಕಾಡುತ್ತಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ