ಗಣೇಶ ಹಬ್ಬಕ್ಕೆ ನಟಿ ರಮ್ಯಾ ಕೊಡಲಿದ್ದಾರೆ ಗುಡ್ ನ್ಯೂಸ್: ಕಾಯ್ತಾ ಇರಿ!

ಮಂಗಳವಾರ, 30 ಆಗಸ್ಟ್ 2022 (10:00 IST)
ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡಲಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಲೇ ಇದೆ.

ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಜೊತೆ ರಮ್ಯಾ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ಬಗ್ಗೆ ರಮ್ಯಾ ಆಗಲೀ ರಾಜ್ ಬಿ ಶೆಟ್ಟಿ ಆಗಲೀ ಎಲ್ಲೂ ಬಾಯ್ಬಿಟ್ಟಿರಲಿಲ್ಲ.

ಇದೀಗ ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ನಾಳೆ ಬೆಳಿಗ್ಗೆ 11.15 ಕ್ಕೆ ಸಿಹಿ ಸುದ್ದಿ ಕೊಡುವುದಾಗಿ ತಿಳಿಸಿದ್ದಾರೆ. ಇದು ಅಧಿಕೃತ ಎಂದೂ ಹೇಳಿದ್ದಾರೆ. ಆ ಮೂಲಕ ತಮ್ಮ ಕಮ್ ಬ್ಯಾಕ್ ಸಿನಿಮಾ ಬಗ್ಗೆ ಮಾಹಿತಿ ಕೊಡುತ್ತಿರುವುದು ಪಕ್ಕಾ ಆಗಿದೆ. ರಮ್ಯಾ ನೀಡಿದ ಈ ಸಂದೇಶ ಅಭಿಮಾನಿಗಳಿಗೆ ಥ್ರಿಲ್ ಕೊಟ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ