ಬಾಹುಬಲಿ ನಟ ರಾಣಾ ದಗ್ಗುಬಟ್ಟಿ ವೈವಾಹಿಕ ಜೀವನ ಅಂತ್ಯ?
ರಾಣಾ ದಗ್ಗುಬಟ್ಟಿ-ಮಿಹಿಕಾ ಎರಡು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಎರಡು ದಿನಗಳ ಹಿಂದಷ್ಟೇ ಇಬ್ಬರು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಾಗಿತ್ತು. ಆದರೆ ಇದಕ್ಕೂ ಮೊದಲೇ ರಾಣಾ ಪತ್ನಿ ಮಿಹಿಕಾ ಜೊತೆಗಿನ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಬಳಿಕ ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಇದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.