ಮುಂಬೈ: ರಣವಿಕ್ರಮ ಸಿನಿಮಾದಲ್ಲಿ ನಟ ಪುನೀತ್ ರಾಜ್ಕುಮಾರ್ ಜತೆ ನಟಿಸಿದ್ದ ಬಹುಭಾಷಾ ನಟಿ ಅದಾ ಶರ್ಮಾ ಅವರು ಮುಂಬೈನಲ್ಲಿ ದುಬಾರಿ ಬೆಲೆ ಬಾಳುವ ಮನೆಯನ್ನು ಖರೀದಿ ಮಾಡಿದ್ದಾರೆ. ಆದರೆ ವಿಶೇಷ ಏನಪ್ಪಾ ಅಂದರೆ ಆ ಮನೆ ಈ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದ ಖ್ಯಾತ ನಟ ಸುಶಾಂತ್ ಸಿಂಗ್ ಅವರಿದ್ದು.
ಮುಂಬೈನ ಮೋಂಟ್ ಬ್ಲ್ಯಾಂಕ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಸುಶಾಂತ್ ಸಿಂಗ್ ಅವರು 2020 ಜೂನ್ 14ರಂದು ಅದೇ ಅಪಾರ್ಟ್ ಮೆಂಟ್ ರೂಮ್ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಆ ನಂತರ ಖಾಲಿ ಇದ್ದ ಮನೆಯನ್ನು ಯಾರು ಖರೀದಿಸಲು ಮುಂದಾಗಿರಲಿಲ್ಲ.
ಅಲ್ಲಿಂದ ಆ ಫ್ಲ್ಯಾಟ್ ಖಾಲಿಯೇ ಉಳಿದಿತ್ತು. ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನೇ ಖರೀದಿಸಿದ್ದಾರೆ ನಟಿ ಅದಾ ಶರ್ಮಾ.
ಮುಂಬೈನ ಆ ಫ್ಲ್ಯಾಟ್ ನಾಲ್ಕು ಕೋಣೆಗಳನ್ನು ಹೊಂದಿದ್ದು, ಸಮುದ್ರಕ್ಕೆ ಮುಖ ಮಾಡಿದ ಮನೆಯಾಗಿದೆ. ಒಟ್ಟು 2500 ಸ್ಕ್ವೇರ್ ಫೀಟ್ ವಿಸ್ತೀರ್ಣ ಹೊಂದಿದೆ. ಇಲ್ಲಿಯೇ ಹಲವಾರು ವರ್ಷಗಳಿಂದ ಸುಶಾಂತ್ ಸಿಂಗ್ ವಾಸವಿದ್ದರು. 2020ರ ಜೂನ್ 14ರಂದು ಅವರು ನಿಧನ ಹೊಂದಿದರು. ಸಾವಿನ ನಂತರ ಯಾರೂ ಈ ಮನೆಯಲ್ಲಿ ಉಳಿದುಕೊಳ್ಳಲು ಇಷ್ಟ ಪಟ್ಟಿರಲಿಲ್ಲ.
ಮನೆ ಖರೀದಿ ಬಗ್ಗೆ ಪ್ರತಿಕ್ರಿಯಿಸಿದ, ಈ ಜಗತ್ತಿನಲ್ಲಿ ಇಲ್ಲದ ವ್ಯಕ್ತಿಯ ಬಗ್ಗೆ ಮಾತನಾಡುವುದು ತಪ್ಪು ಎಂದು ನಾನು ಭಾವಿಸಿದೆ. ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ಹೀಗಾಗಿ, ನಾನು ಆ ಮನೆ ಖರೀದಿಸಿದೆ. ಅವರ ಬಗ್ಗೆ ಮಾಡಿದ ಕೆಲವು ಕಮೆಂಟ್ಗಳನ್ನು ನೋಡಿದೆ. ನನ್ನನ್ನು ಟ್ರೋಲ್ ಮಾಡಿ. ಆದರೆ, ಜಗತ್ತಿನಲ್ಲಿ ಇಲ್ಲದ ಆ ವ್ಯಕ್ತಿ ಬಗ್ಗೆ ಮಾತನಾಡಬೇಡಿ ಎಂದು ವಿನಂತಿಸಿದ್ದರು.