ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆಯಾಗಿದ್ದ ನಟ ಮಡೆನುರು ಮನು ಇದೀಗ ಸಂತ್ರಸ್ತೆ ಜತೆಗೆ ರಾಜಿ ಮಾಡಿಕೊಂಡಿದ್ದಾರೆ.
ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ಇದೀಗ ಕೇಸನ್ನು ವಾಪಾಸ್ ಪಡೆದಿದ್ದಾರೆ. ಖ್ಯಾತಿಯ ನಟಿ ಇದೀಗ ಕೇಸನ್ನು ಹಿಂಪಡೆದಿದ್ದಾರೆ.
ಈ ಹಿಂದೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಮಡೆನೂರು ಮನು ವಿರುದ್ಧ ಸಂತ್ರಸ್ತೆ ದೂರು ನೀಡಿ ನವೆಂಬರ್ 2022ರಿಂದ ಮೇ 2025ರವರೆಗೆ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ. ಮದುವೆ ಹೆಸರಿನಲ್ಲಿ ಅತ್ಯಾಚಾರ ಎಸಗಿ ದೈಹಿಕ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ದೂರಿದ್ದರು.
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಮಡೆನೂರು ಮನುವನ್ನು ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಬಳಿಕ ನ್ಯಾಯಾಲಯ ಮಡೆನೂರು ಮನುವನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಜಾಮೀನು ಮೂಲಕ ಹೊರಬಂದಿರುವ ಮನು ಕಾನೂನು ಹೋರಾಟ ಮಾಡುವುದಾಗಿ ಹೇಳಿಕೊಂಡಿದ್ದರು.