ಕೊಡಗಿನಲ್ಲಿ ಅದ್ಧೂರಿ ಆರತಕ್ಷತೆ ಮಾಡಿಕೊಂಡ ರಶ್ಮಿಕಾಗೆ ತಂದೆಕಡೆಯಿಂದ ಸಿಕ್ತು ದೊಡ್ಡ ಗಿಫ್ಟ್‌

Sampriya

ಬುಧವಾರ, 8 ಏಪ್ರಿಲ್ 2026 (15:24 IST)
ಮಡಿಕೇರಿ: ಈಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು, ಮೊನ್ನೆಯಷ್ಟೇ ಕೊಡಗಿನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಸಿಕೊಂಡ ವಿಜಯ್ ರಶ್ಮಿಕಾ ಜೋಡಿಗೆ ಅವರ ರಶ್ಮಿಕಾ  ತಂದೆ ಮದನ್ ಮಂದಣ್ಣ ದೊಡ್ಡ ಉಡುಗೊರೆಯನ್ನು ನೀಡಿದ್ದಾರೆ ಎನ್ನಲಾಗಿದೆ.  

ವಿರಾಜಪೇಟೆ ಚೆಂಚೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಲೂರು ಗ್ರಾಮದ ನಿವಾಸಿ, ಮಾಜಿ ವಿರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾಗಿದ್ದ ಮದನ್ ಮಂದಣ್ಣ ಮತ್ತು ಪತ್ನಿ ಸುಮನ್ ಮಂದಣ್ಣ ಅವರ ಹೆಸರಿನಲ್ಲಿದ್ದ ಸರ್ವೆ ಸಂಖ್ಯೆ 142/1 ಮತ್ತು 142/2 ಐಷಾರಾಮಿ (ಸೆರಿನಿಟಿ) ಮನೆಯನ್ನು ವಿರಾಜಪೇಟೆ ಉಪನೋಂದಣಿ ಕಚೇರಿಯಲ್ಲಿ ಮಗಳು ರಶ್ಮಿಕಾ ಮಂದಣ್ಣ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಟ್ಟಿದ್ದಾರೆ.

ನಟರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಫೆಬ್ರವರಿ 26, 2026 ರಂದು ರಾಜಸ್ಥಾನದ ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ಖಾಸಗಿ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 

ವಿವಾಹವು ತೆಲುಗು ಮತ್ತು ಕೊಡವ ಸಂಪ್ರದಾಯಗಳನ್ನು ಒಳಗೊಂಡಿತ್ತು ಮತ್ತು ಆಪ್ತರು ಮತ್ತು ಸ್ನೇಹಿತರು ಭಾಗವಹಿಸಿದ್ದರು. ಮಾರ್ಚ್ 4, 2026 ರಂದು ಹೈದರಾಬಾದ್‌ನಲ್ಲಿ ಭವ್ಯವಾದ ಆರತಕ್ಷತೆಯನ್ನು ಆಯೋಜಿಸಲಾಯಿತು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ