ರಶ್ಮಿಕಾ ಮಂದಣ್ಣ ಬಾಲಿವುಡ್ ಜರ್ನಿ ಶುರು

ಭಾನುವಾರ, 7 ಫೆಬ್ರವರಿ 2021 (09:28 IST)
ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಸಿನಿಮಾ ಒಪ್ಪಿಕೊಂಡ ಸುದ್ದಿ ಎಲ್ಲರಿಗೂ ಗೊತ್ತೇ ಇದೆ. ಸಿದ್ಧಾರ್ಥ್ ಮಲ್ಹೋತ್ರ ನಾಯಕರಾಗಿರುವ ಮಿಷನ್ ಮಂಜು ಸಿನಿಮಾಗೆ ರಶ್ಮಿಕಾ ನಾಯಕಿ ಎಂಬುದು ಈಗಾಗಲೇ ಅನೌನ್ಸ್ ಆದ ಸಂಗತಿ.


ಇದೀಗ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ನಿನ್ನೆಯಿಂದ ಲಕ್ನೋದಲ್ಲಿ ಮಿಷನ್ ಮಂಜು ಸಿನಿಮಾ ಚಿತ್ರೀಕರಣ ಶುರುವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ರಶ್ಮಿಕಾ ಸದ್ಯದಲ್ಲೇ ಚಿತ್ರತಂಡ ಕೂಡಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ