ಮಜಾ ಟಾಕೀಸ್ ಗೆ ಬಂದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ

ಶನಿವಾರ, 27 ಫೆಬ್ರವರಿ 2021 (09:03 IST)
ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಕನ್ನಡದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬ ಅಪವಾದವಿದೆ. ಆದರೆ ಈಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಮಜಾ ಟಾಕೀಸ್ ಗೆ ಬಂದಿದ್ದಾರೆ.


ಧ್ರುವ ಸರ್ಜಾ-ರಶ್ಮಿಕಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಪೊಗರು ಸಿನಿಮಾ ಪ್ರಮೋಷನ್ ಗೆ ನಿರ್ದೇಶಕ ನಂದಕಿಶೋರ್, ಡಾಲಿ ಧನಂಜಯ್ ಜೊತೆ ರಶ್ಮಿಕಾ ಕೂಡಾ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದು ಇಂದು ರಾತ್ರಿ 8 ರಿಂದ 10 ಗಂಟೆಯವರೆಗೆ ಪ್ರಸಾವರಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ