ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ರಶ್ಮಿಕಾ ಮಂದಣ್ಣ ಏನೇ ಪೋಸ್ಟ್ ಹಾಕಿದರೂ ಅವರನ್ನು ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗುತ್ತದೆ. ಆದರೆ ಈ ಟ್ರೋಲ್ ಗಳಿಗೆಲ್ಲಾ ನಾನು ಹೆದರೋಳಲ್ಲ ಎಂದು ರಶ್ಮಿಕಾ ಹೇಳಿಕೊಂಡಿದ್ದಾರೆ.
ಇನ್ ಸ್ಟಾಗ್ರಾಂನಲ್ಲಿ ರಶ್ಮಿಕಾ ಈ ಬಗ್ಗೆ ಸುದೀರ್ಘವಾಗಿ ಪೋಸ್ಟ್ ಮಾಡಿರುವ ರಶ್ಮಿಕಾ ನನ್ನನ್ನು ಸಾಕಷ್ಟು ಟ್ರೋಲ್ ಮಾಡಲಾಗುತ್ತದೆ. ಆದರೆ ಅದಕ್ಕೆಲ್ಲಾ ಕೇರ್ ಮಾಡಲ್ಲ. ನನ್ನ ಲುಕ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಆದರೆ ನನಗನಿಸಿದ್ದನ್ನು ನಾನು ನೇರವಾಗಿ ಹಂಚಿಕೊಳ್ಳುತ್ತೇನೆ. ಯಾವುದಕ್ಕೂ ಕೇರ್ ಮಾಡಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.