ಅಫ್ಘಾನಿಸ್ತಾನ ಬಿಕ್ಕಟ್ಟಿನ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಪ್ರತಿಕ್ರಿಯಿಸಿದ್ದು ಹೀಗೆ

ಬುಧವಾರ, 18 ಆಗಸ್ಟ್ 2021 (09:19 IST)
ಮುಂಬೈ: ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದ ನಂತರ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸೆಲೆಬ್ರಿಟಿಗಳೂ ಪ್ರತಿಕ್ರಿಯಿಸುತ್ತಿದ್ದಾರೆ.


ನಟಿ ರಶ್ಮಿಕಾ ಮಂದಣ್ಣ ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಅಫ್ಘಾನಿಸ್ತಾನದ ವಿದ್ಯಮಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಸ್ಥಿತಿ ಬಗ್ಗೆ ಹೇಳಿಕೊಳ್ಳುವ ವಿಡಿಯೋವೊಂದನ್ನು ಪ್ರಕಟಿಸಿರುವ ರಶ್ಮಿಕಾ ‘ಏನಾದರೂ ಮಾಡಲೇಬೇಕಿದೆ’ ಎಂದಿದ್ದಾರೆ.

ರಶ್ಮಿಕಾ ಮಾತ್ರವಲ್ಲದೆ, ನಟಿ ಸಮಂತಾ ಪ್ರಭು ಕೂಡಾ ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿ ಅನೇಕ ತಾರೆಯರು ಅಫ್ಘಾನಿಸ್ತಾನದಲ್ಲಿ ಸದ್ಯ ನಡೆಯುತ್ತಿರುವ ಅರಾಜಕತೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ