ಖುಷಿಯಿಂದಲೇ ಖುಷಿ ವಿಚಾರವೊಂದನ್ನು ಹಂಚಿಕೊಂಡ ರಶ್ಮಿಕಾ ಮಂದಣ್ಣ

ಸೋಮವಾರ, 14 ಅಕ್ಟೋಬರ್ 2019 (11:39 IST)
ಹೈದರಾಬಾದ್: ತೆಲುಗಿನಲ್ಲಿ ಬ್ಯುಸಿಯಾಗಿರುವ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಖುಷಿ ವಿಚಾರವನ್ನು ಹಂಚಿಕೊಂಡಿದ್ದಾರೆ.


ರಶ್ಮಿಕಾ ಮಹೇಶ್ ಬಾಬು ನಾಯಕರಾಗಿ ನಟಿಸಿರುವ ಸರಿಲೇರು ನೀಕೆವ್ವರು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

ಆ ಸಿನಿಮಾದ ರಿಲೀಸ್ ಯಾವಾಗ ಎಂಬುದು ಈಗ ಬಹಿರಂಗವಾಗಿದ್ದು, ಮುಂದಿನ ವರ್ಷ ಅಂದರೆ 2020 ರ ಜನವರಿ 12 ರಂದು ಬಿಡುಗಡೆಯಾಗುತ್ತಿದೆ ಎಂದು ಗೊತ್ತಾಗಿದೆ. ಈ ಸಿನಿಮಾ ಮುಂದಿನ ವರ್ಷ ಸಂಕ್ರಾಂತಿಗೆ ಬಿಡುಗಡೆಯಾಗುತ್ತಿದೆ ಎಂದು ಖುಷಿಯಿಂದಲೇ ರಶ್ಮಿಕಾ ಹಂಚಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ