ಕೊಡಗರ ಮನವಿಗೆ ಸ್ಪಂದಿಸಿದ ಸಂಸದ ಪ್ರತಾಪ್ ಸಿಂಹಗೆ ಕೃತಜ್ಞತೆ ಸಲ್ಲಿಸಿದ ರಶ್ಮಿಕಾ ಮಂದಣ್ಣ

ಶನಿವಾರ, 15 ಜೂನ್ 2019 (10:04 IST)
ಬೆಂಗಳೂರು: ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕು ಎಂಬ ಸೋಷಿಯಲ್ ಮೀಡಿಯಾ ಅಭಿಯಾನಕ್ಕೆ ಸಂಸದ ಪ್ರತಾಪ್ ಸಿಂಹ ಸ್ಪಂದಿಸಿದ್ದಾರೆ.


ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕೆಂಬ ಬೇಡಿಕೆ ಮುಂದಿಟ್ಟು ಕೊಡಗು ಮೂಲದ ಸೆಲೆಬ್ರಿಟಿಗಳು, ಜನಸಾಮಾನ್ಯರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನೇ ಶುರು ಮಾಡಿದ್ದರು. ಇದಕ್ಕೆ ನಟಿ ರಶ್ಮಿಕಾ ಮಂದಣ್ಣ ಕೂಡಾ ಕೈ ಜೋಡಿಸಿದ್ದರು.

ಇದೀಗ ಕೊಡಗಿನ ಜನರ ಮನವಿಗೆ ಸ್ಪಂದಿಸಿರುವ ಸ್ಥಳೀಯ ಸಂಸದ ಪ್ರತಾಪ್ ಸಿಂಹ ಈ ವಿಚಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕೇಂದ್ರದ ಪ್ರಧಾನಿ ಮೋದಿ ಸರ್ಕಾರದ ಮುಂದೆ ಗಮನಕ್ಕೆ ತರುವುದಾಗಿ ಹೇಳಿದ್ದು, ತಕ್ಷಣವೇ ಬೇಡಿಕೆ ಈಡೇರಿಸಲು ಕ್ರಮಕ್ಕೆ ಮುಂದಾಗಿದ್ದಾರೆ.

ಸಂಸದ ಪ್ರತಾಪ್ ಸಿಂಹ ಈ ಬಗ್ಗೆ ಟ್ವೀಟ್ ಮಾಡಿದ್ದಕ್ಕೆ ಧನ್ಯವಾದ ಸಲ್ಲಿಸಿರುವ ರಶ್ಮಿಕಾ ಮಂದಣ್ಣ ನಮ್ಮ ಬೇಡಿಕೆಗೆ ಇಷ್ಟು ಬೇಗ ಸ್ಪಂದಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ