ತೆಲುಗಿನಲ್ಲಿ ಕನ್ನಡ ಹೀರೋಗೆ ರಶ್ಮಿಕಾ ಮಂದಣ್ಣ ಹೀರೋಯಿನ್
ರಶ್ಮಿಕಾ ಮಂದಣ್ಣ ನಾಯಕಿಯಾಗಿರುವ ಹೊಸ ಸಿನಿಮಾ ಅನೌನ್ಸ್ ಆಗಿದ್ದು ಇದಕ್ಕೆ ‘ಗರ್ಲ್ ಫ್ರೆಂಡ್’ ಎಂದು ಟೈಟಲ್ ಇಡಲಾಗಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ರಶ್ಮಿಕಾಗೆ ಕನ್ನಡ ಮೂಲದ ನಟನೇ ನಾಯಕನಾಗುತ್ತಿದ್ದಾರೆ.
ಗರ್ಲ್ ಫ್ರೆಂಡ್ ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ರಶ್ಮಿಕಾ ಜೊತೆಗೆ ‘ದಿಯಾ’ ಖ್ಯಾತಿಯ ಕನ್ನಡ ನಟ ದೀಕ್ಷಿತ್ ಶೆಟ್ಟಿ ನಾಯಕರಾಗಲಿದ್ದಾರೆ. ರಾಹುಲ್ ರವೀಂದ್ರನ್ ನಿರ್ದೇಶನದ ಸಿನಿಮಾ ಇದಾಗಿದ್ದು, ಅಲ್ಲು ಅರವಿಂದ್ ನಿರ್ಮಾಣ ಮಾಡಲಿದ್ದಾರೆ.
ರಶ್ಮಿಕಾರಂತೇ ಕನ್ನಡದಲ್ಲಿ ಮೊದಲು ನಟಿಸಿದ್ದ ದೀಕ್ಷಿತ್ ಇದೀಗ ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ. ಕನ್ನಡದಲ್ಲಿ ಸಿಗದ ಅವಕಾಶ ದೀಕ್ಷಿತ್ ಗೆ ತೆಲುಗಿನಲ್ಲಿ ಸಿಗುತ್ತಿರುವುದು ವಿಶೇಷ.