ದರ್ಶನ್ ಗೆ ಬಿಡುಗಡೆ ಸುಲಭವಲ್ಲ: ಕೋರ್ಟ್ ನಲ್ಲಿ ಇಂದು ಆಗಿದ್ದೇನು

Sampriya

ಶುಕ್ರವಾರ, 27 ಸೆಪ್ಟಂಬರ್ 2024 (17:05 IST)
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇದೀಗ ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ.

ಜಾಮೀನು ಕೋರಿ ದರ್ಶನ್ ಹಾಗೂ ಎ1 ಆರೋಪಿ ಪವಿತ್ರಾ ಗೌಡ ಅವರು ಅರ್ಜಿ ಸಲ್ಲಿಸಿದ್ದರು. ಆದರೆ 57ನೇ ಸಿಟಿ ಸಿವಿಲ್ ಕೋರ್ಟ್‌ ಜಾಮೀನು ಅರ್ಜಿಯನ್ನು ಅಕ್ಟೋಬರ್ 1ಕ್ಕೆ ಮುಂದೂಡಿದೆ.  ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಮೂವರಿಗೆ ಜಾಮೀನು ಮಂಜೂರಾಗಿತ್ತು. ಇದರಿಂದ ದರ್ಶನ್ ಕೂಡಾ ಇಂದು ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದರು.

ಆದರೆ ಇದೀಗ ಕೋರ್ಟ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದು, ಅಕ್ಟೋಬರ್ 1ರ ವರೆಗೆ ಜೈಲು ಊಟವೇ ಫಿಕ್ಸ್ ಆಗಿದೆ. ಆರೋಪಿ ವಿನಯ್ ಅವರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ. ಈ ಪ್ರಕರಣದಲ್ಲಿ ಈ ವಾರ ಯಾವ ಆರೋಪಿಗೆ ಜಾಮೀನು ಸಿಗಬಹುದೆಂಬ ಕುತೂಹಲ ಹೆಚ್ಚಾಗಿತ್ತು. ಆದರೆ ಇದೀಗ ಬೇಲ್‌ಗೆ ಅರ್ಜಿ ಸಲ್ಲಿಸಿದ ಆರೋಪಿಗಳಿಗೆ ನಿರಾಸೆಯಾಗಿದೆ.

ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಅವರು ಜಾಮೀನು ಅರ್ಜಿಯನ್ನು ಕೋರ್ಟ್ ಎರಡನೇ ಬಾರಿ ಮುಂದೂಡಿಕೆ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ