ರೇಣುಕಾಸ್ವಾಮಿ ಹತ್ಯೆ ಪ್ರಕರಣ, ಇದೇ ವಾರ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಸಲ್ಲಿಕೆ ಸಾಧ್ಯತೆ

Sampriya

ಸೋಮವಾರ, 2 ಸೆಪ್ಟಂಬರ್ 2024 (16:44 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಪೊಲೀಸರ ತಂಡ ಇದೇ ವಾರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಹಿಂದೆ ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ದಯಾನಂದ ಬಿ ಅವರು, ಪ್ರಕರಣ ಸಂಬಂಧ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸುತ್ತೇವೆ ಎಂದಿದ್ದರು.

ನಟ ದರ್ಶನ್, ಆತನ ಆಪ್ತೆ ಪವಿತ್ರಾ ಗೌಡ, ಪಿಎ ನಾಗರಾಜ್ ಸೇರಿದಂತೆ ಪ್ರಕರಣ ಸಂಬಂಧ 15ಮಂದಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ

ಈಗಾಗಲೇ ತನಿಖೆ ಸಂಬಂಧ ಎಲ್ಲ ವಿಧಿವಿಜ್ಞಾನ ಮತ್ತು ತಾಂತ್ರಿಕ ವರದಿಗಳು ಬಂದಿದ್ದು, ಬಿಗಿಯಾದ ಚಾರ್ಜ್ ಶೀಟ್ ರೂಪಿಸಲಾಗುತ್ತಿದೆ ಎನ್ನಲಾಗಿದೆ. ಪ್ರಕರಣದ ಸಂಬಂಧ 200ಕ್ಕೂ ಅಧಿಕ ಸಾಕ್ಷ್ಯಗಳನ್ನು ಹಾಗೂ ಆರೋಪಿಗಳ ಮನೆ, ಹತ್ಯೆ ನಡೆದ ಸ್ಥಳ, ಅಂದು ಆರೋಪಿಗಳು ಧರಿಸಿದ್ದ ಬಟ್ಟೆ ಹಾಗೂ ಅವರಿಂದ ಸುತ್ತಾ ಮುತ್ತಲಿನ ಸಿಸಿಟಿವಿ ಫೂಟೇಜ್‌ ಅನ್ನು ವಶಪಡಿಸಿಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಸಂಬಂಧ ಜೂನ್ 9 ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಜೂನ್ 11 ರಂದು ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು. ಘೋರ ಅಪರಾಧಗಳ ಆರೋಪಿಗಳನ್ನು ಬಂಧಿಸಿದ 90 ದಿನಗಳಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ