ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

Krishnaveni K

ಮಂಗಳವಾರ, 22 ಜುಲೈ 2025 (12:12 IST)
ನವದೆಹಲಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಅರ್ಜಿ ಪ್ರಶ್ನಿಸಿ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದೂ ತೀರ್ಪು ಮುಂದೂಡಿದೆ.

ಇಂದು ದರ್ಶನ್ ಆಂಡ್ ಗ್ಯಾಂಗ್ ಗೆ ನೀಡಲಾಗಿದ್ದ ಜಾಮೀನು ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇದೀಗ ಕೋರ್ಟ್ ಇಂದೂ ತೀರ್ಪು ಮುಂದೂಡಿದೆ. ಗುರುವಾರ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

ಇಂದು ದರ್ಶನ್ ಪರ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಬೇಕಿತ್ತು. ಆದರೆ ಅವರಿಗೆ ಬೇರೆ ಪ್ರಕರಣದಲ್ಲಿ ವಾದ ಮಂಡಿಸಬೇಕಿತ್ತು. ಹೀಗಾಗಿ ಈ ಪ್ರಕರಣದ ವಾದ ಮಂಡನೆಗೆ ಎರಡು ದಿನಗಳ ಕಾಲಾವಕಾಶ ಕೋರಿದರು. ಈ ಹಿನ್ನಲೆಯಲ್ಲಿ ಕೋರ್ಟ್ ತೀರ್ಪು ಎರಡು ದಿನ ಮುಂದೂಡಿದೆ.

ದರ್ಶನ್ ಇದೀಗ ಡೆವಿಲ್ ಸಿನಿಮಾ ಶೂಟಿಂಗ್ ನಿಮಿತ್ತ ಥೈಲ್ಯಾಂಡ್ ನಲ್ಲಿದ್ದಾರೆ. ಈಗ ಸುಪ್ರೀಂಕೋರ್ಟ್ ತೀರ್ಪು ಮುಂದೂಡಿರುವುದರಿಂದ ಎರಡು ದಿನಗಳ ಮಟ್ಟಿಗೆ ಅವರು ನಿರಾಳವಾಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ