ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ 6ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ಮುಂದೂಡಿತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.
ಸದ್ಯ ನಟ ದರ್ಶನ್ ಅವರಿಗೆ ಬಳ್ಳಾರಿ ಜೈಲಿನಲ್ಲಿ ಕಾಣಿಸಿಕೊಂಡ ತೀವ್ರ ಬೆನ್ನುನೋವಿನ ಸಲುವಾಗಿ, ಚಿಕಿತ್ಸೆಯ ದೃಷ್ಟಿಯಿಂದ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಜೈಲಿನಿಂದ ಹೊರಬಂದಿರುವ ದರ್ಶನ್ ಅವರು ಕಳೆದ 21ದಿವಸದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿಕ್ಕಿರುವ ಮಾಹಿತಿ ಪ್ರಕಾರ ದರ್ಶನ್‌ಗೆ ಇದೀಗ ಫಿಸಿಯೋಥೆರಪಿ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಇನ್ನೂ ದರ್ಶನ್ ಗೆ ನೀಡಿದ ಮದ್ಯಂತರ ಜಾಮೀನು ಸಂಬಂಧ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ದತೆ ನಡೆಸಿಕೊಂಡಿದೆ. ಒಟ್ಟಾರೆ ದರ್ಶನ್ ಮದ್ಯಂತರ ಜಾಮೀನ ಮೂಲಕ ಹೊರಬಂದರು ತಲೆನೋವು ಮಾತ್ರ ಕಮ್ಮಿಯಾಗಿಲ್ಲ.