ಸೈಮಾದಲ್ಲಿ ಗೆದ್ದ 10 ಪ್ರಶಸ್ತಿಯನ್ನು ಮೂವರಿಗೆ ಅರ್ಪಿಸಿದ ರಿಷಬ್ ಶೆಟ್ಟಿ

ಬುಧವಾರ, 20 ಸೆಪ್ಟಂಬರ್ 2023 (09:20 IST)
ಬೆಂಗಳೂರು: ಇತ್ತೀಚೆಗೆ ದುಬೈನಲ್ಲಿ ನಡೆದಿದ್ದ ದಕ್ಷಿಣ ಭಾರತ ಸಿನಿಮಾ ರಂಗದ ಪ್ರತಿಷ್ಠಿತ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಕನ್ನಡದ ಕಾಂತಾರ ಸಿನಿಮಾ ಒಟ್ಟು 10 ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದಿತ್ತು.

ಅತ್ಯುತ್ತಮ ನಟ, ನಟಿ, ನಿರ್ದೇಶಕ, ಸಂಗೀತ ನಿರ್ದೇಶಕ, ಕತೆ, ಗಾಯಕ, ಹಾಸ್ಯ ನಟ, ಪೋಷಕ ನಟ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಿನಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು.

ಈ ಪ್ರಶಸ್ತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಧನ್ಯವಾದ ಸಲ್ಲಿಸಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಈ ಪ್ರಶಸ್ತಿಯನ್ನು ವಿಶೇಷವಾಗಿ ಮೂವರಿಗೆ ಅರ್ಪಿಸುವುದಾಗಿ ಹೇಳಿದ್ದಾರೆ. ‘ಈ ಎಲ್ಲಾ ಯಶಸ್ಸು ದೈವ ನರ್ತಕರಿಗೆ, ಅಪ್ಪು ಸರ್ ಮತ್ತು ಕನ್ನಡಿಗರಿಗೆ ಅರ್ಪಣೆ’ ಎಂದು ರಿಷಬ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ