ಫಿಲಂ ಸಿಟಿಗೆ ಬೇಡಿಕೆಯಿಟ್ಟ ರಿಷಬ್ ಶೆಟ್ಟಿ
ಇದೀಗ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಕೂಡಾ ಫಿಲಂ ಸಿಟಿ ಅಗತ್ಯದ ಬಗ್ಗೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಅನುಕೂಲಕ್ಕಾಗಿ ಬೆಂಗಳೂರಿನಲ್ಲೇ ಫಿಲಂ ಸಿಟಿ ನಿರ್ಮಾಣ ಮಾಡಿ ಎಂದು ರಿಷಬ್ ಸರ್ಕಾರಕ್ಕೆ ಬೇಡಿಕೆಯಿಟ್ಟಿದ್ದಾರೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಆಯೋಜಿಸಿದ್ದ ಯುವ ಶಕ್ತಿ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು ಫಿಲಂ ಸಿಟಿ ನಿರ್ಮಾಣ ಮತ್ತು ಅದರ ಅಗತ್ಯದ ಬಗ್ಗೆ ಮಾತನಾಡಿದ್ದಾರೆ.