ಸ್ವಾತಂತ್ರ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಿಕೊಂಡ ರಿಷಬ್ ಶೆಟ್ಟಿ: ನೀವೇ ನಿಜವಾದ ಕನ್ನಡಿಗ ಎಂದ ಫ್ಯಾನ್ಸ್
ಕಾಂತಾರ ಚಾಪ್ಟರ್ 1 ಶೂಟಿಂಗ್ ಗಾಗಿ ರಿಷಬ್ ತಮ್ಮ ತವರು ಕುಂದಾಪುರದಲ್ಲಿ ಬೀಡು ಬಿಟ್ಟಿದ್ದಾರೆ. ನಿನ್ನೆ ಸ್ವಾತಂತ್ರ್ಯೋತ್ಸವವನ್ನೂ ರಿಷಬ್ ತಮ್ಮ ತವರಿನಲ್ಲಿಯೇ ಆಚರಿಸಿಕೊಂಡಿದ್ದಾರೆ. ಅದೂ ತಮ್ಮೂರು ಕೆರಾಡಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳೊಂದಿಗೆ ಆಚರಿಸಿಕೊಂಡಿದ್ದಾರೆ.
ಈ ಶಾಲೆಯನ್ನು ರಿಷಬ್ ಶೆಟ್ಟಿ ದತ್ತು ಪಡೆದುಕೊಂಡು ಅಭಿವೃದ್ಧಿ ಪಡಿಸಿದ್ದಾರೆ. ಆ ಮೂಲಕ ತಮ್ಮೂರಿನ ಶಾಲೆಗೆ ಕೊಡುಗೆ ನೀಡಿದ್ದಾರೆ. ಆದರೆ ಇಷ್ಟಕ್ಕೇ ಅವರು ನಿಲ್ಲಿಸಿಲ್ಲ. ಆಗಾಗ ಶಾಲೆಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಆದರೆ ಈ ಬಾರಿ ಮಕ್ಕಳೊಂದಿಗೆ ತಾವೂ ಮಗುವಾಗಿ ಶಾಲೆಯಲ್ಲೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ.
ಶಾಲೆಯ ಮೇಷ್ಟ್ರೊಂದಿಗೆ ತಾವೂ ನಿಂತು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದ್ದಾರೆ. ಈ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಿಷಬ್ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿರುವ ವಿಡಿಯೋ ನೋಡಿ ನೀವೇ ನಿಜವಾದ ಕನ್ನಡದ ಕಂದ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.