ಹುಟ್ಟುಹಬ್ಬಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ಫ್ಯಾನ್ಸ್ ಗೆ ಭರ್ಜರಿ ಆಫರ್

ಬುಧವಾರ, 5 ಜುಲೈ 2023 (08:20 IST)
ಬೆಂಗಳೂರು: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಈ ಬಾರಿ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಕೊಡುಗೆ ನೀಡುತ್ತಿದ್ದಾರೆ.

ಜುಲೈ 7 ರಂದು ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ರಿಷಬ್ ಗೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಲು ಸಾಧ‍್ಯವಾಗಿರಲಿಲ್ಲ.

ಈ ಬಾರಿ ಕಾಂತಾರ ಮೂಲಕ ತಮ್ಮನ್ನು ಡಿವೈನ್ ಸ್ಟಾರ್ ಮಾಡಿರುವ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಲು ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದಾರೆ. ಜುಲೈ 7 ರಂದು ನಂದಿ ಲಿಂಕ್ ಗ್ರೌಂಡ್ ನಲ್ಲಿ ಅಪರಾಹ್ನ 3 ಗಂಟೆಯಿಂದ ಅಭಿಮಾನಿಗಳನ್ನು ಭೇಟಿ ಮಾಡುವುದಾಗಿ ರಿಷಬ್ ಹೇಳಿದ್ದಾರೆ. ಎಲ್ಲರೂ ಅಲ್ಲಿಗೆ ಬನ್ನಿ. ನಿಮ್ಮನ್ನೆಲ್ಲಾ ಭೇಟಿಯಾಗುವೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ