ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಸೋಮವಾರ, 23 ಡಿಸೆಂಬರ್ 2019 (15:49 IST)
ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭ ಇಂದು ನಡೆದಿದ್ದು, ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರು ಪ್ರಶಸ್ತಿ ಸ್ವೀಕರಿಸಿದ್ದಾರೆ.


ಈ ಬಾರಿ ಕನ್ನಡ ಸಿನಿಮಾಗಳೂ ಹಲವು ವಿಭಾಗಗಳಲ್ಲಿ ಪ್ರಶಸ್ತಿಗೆ ಭಾಜನವಾಗಿತ್ತು. ಅದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾವೂ ಒಂದು.

ಈ ಸಿನಿಮಾದ ನಿರ್ದೇಶನಕ್ಕಾಗಿ ರಿಷಬ್ ಶೆಟ್ಟಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರಿಂದ ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇದಲ್ಲದೆ, ಶ್ರುತಿ ಹರಿಹರನ್ ಅಭಿನಯದ ‘ನಾತಿಚರಾಮಿ’ ಸಿನಿಮಾ ಕೂಡಾ ಪ್ರಶಸ್ತಿಗೆ ಭಾಜನವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ