ಕಾಂತಾರ 2 ಬಿಟ್ಟು ನನಗೆ ಬೇರೇನೂ ಯೋಚನೆಯಿಲ್ಲ ಎಂದ ರಿಷಬ್ ಶೆಟ್ಟಿ

ಶುಕ್ರವಾರ, 8 ಸೆಪ್ಟಂಬರ್ 2023 (08:40 IST)
ಬೆಂಗಳೂರು: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮುಂದಿನ ವರ್ಷ ಲಗಾನ್ ನಿರ್ದೇಶಕ ಆಶುತೋಷ್ ಗೊವಾರಿಕರ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿಯೊಂದು ಬಂದಿತ್ತು.

ಈ ಬಗ್ಗೆ ರಿಷಬ್ ಸ್ಪಷ್ಟನೆ ಕೊಟ್ಟಿದ್ದಾರೆ. ಸದ್ಯಕ್ಕೆ ನನಗೆ ಕಾಂತಾರ 2 ಸಿನಿಮಾ ಬಿಟ್ಟು ಬೇರೆ ಯೋಚನೆಯಿಲ್ಲ ಎಂದಿದ್ದಾರೆ. ಈ ಮೂಲಕ ಬಾಲಿವುಡ್ ಸಿನಿಮಾ ಬಗ್ಗೆ ಸದ್ಯಕ್ಕೆ ಯೋಚಿಸಿಲ್ಲ ಎಂದಿದ್ದಾರೆ.

ಕಾಂತಾರ ಬಿಡುಗಡೆಯಾದ ಬಳಿಕ ರಿಷಬ್ ಮಾರ್ಕೆಟ್ ವಾಲ್ಯೂ ದಿಡೀರ್ ಏರಿಕೆಯಾಗಿದೆ. ಇದೇ ಕಾರಣಕ್ಕೆ ಕಾಂತಾರ 2 ಸಿನಿಮಾವನ್ನು ಅಷ್ಟೇ ಶ್ರದ್ಧೆಯಿಂದ ಮಾಡುತ್ತಿದ್ದಾರೆ. ಸದ್ಯಕ್ಕೆ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿದ್ದು ಈ ವರ್ಷದಂತ್ಯಕ್ಕೆ ಸಿನಿಮಾ ಶೂಟಿಂಗ್ ಆರಂಭವಾಗುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ