ಹೊಂಬಾಳೆ ಫಿಲಂಸ್ ನ ಹೊಸ ಸಿನಿಮಾಗೆ ರಿಷಬ್ ಶೆಟ್ಟಿ ಸಾರಥಿ

ಶನಿವಾರ, 7 ಆಗಸ್ಟ್ 2021 (08:50 IST)
ಬೆಂಗಳೂರು: ಕ್ರಿಯೇಟಿವ್ ನಿರ್ದೇಶಕ ರಿಷಬ್ ಶೆಟ್ಟಿ ಮತ್ತೊಂದು ಅದ್ಭುತ ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರಲು ನಿರ್ಧರಿಸಿದ್ದಾರೆ.
Photo Courtesy: Twitter


ಈ ಬಾರಿ ಅವರು ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆಯ ನಿರ್ಮಾಣದಲ್ಲಿ ಹೊಸ ಸಿನಿಮಾ ಮಾಡಲು ಹೊರಟಿದ್ದಾರೆ. ಇದರ ಟೈಟಲ್ ‘ಕಾಂತಾರ’ ಎಂದು ನಿನ್ನೆ ಘೋಷಣೆ ಮಾಡಲಾಗಿದೆ.

ವಿಶೇಷವೆಂದರೆ ಈ ಸಿನಿಮಾವನ್ನು ರಿಷಬ್ ನಿರ್ದೇಶನ ಮಾಡುವುದರ ಜೊತೆಗೆ ನಾಯಕನ ಪಾತ್ರದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 27 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದ್ದು, ಇದನ್ನು ನೋಡುತ್ತಿದ್ದರೆ ಇದು ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳದ ಹಿನ್ನಲೆಯ ಕತೆಯೇನೋ ಎಂಬ ಭಾವನೆ ಬರುತ್ತಿದೆ. ಇದು ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಘರ್ಷದ ಹಿನ್ನಲೆಯುಳ್ಳ ಸಿನಿಮಾ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ