ಲಗಾನ್ ನಿರ್ದೇಶಕ ಆಶುತೋಷ್ ಗೋವಾರಿಕರ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ

ಸೋಮವಾರ, 4 ಸೆಪ್ಟಂಬರ್ 2023 (09:16 IST)
ಬೆಂಗಳೂರು: ಕಾಂತಾರ ಸಿನಿಮಾ ಮೂಲಕ ಪರಭಾಷಿಕರ ಗಮನ ಸೆಳೆದಿದ್ದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಈಗ ‘ಲಗಾನ್’ ಸಿನಿಮಾ ಖ್ಯಾತಿಯ ಆಶುತೋಷ್ ಗೋವಾರಿಕರ್ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಬಂದಿದೆ.

ಆಶುತೋಷ್ ಗೋವಾರಿಕರ್ ಬಾಲಿವುಡ್ ನ ಖ್ಯಾತ ನಿರ್ದೇಶಕರು. ಅವರೀಗ ಪ್ಯಾನ್ ಇಂಡಿಯಾ ಸಿನಿಮಾವೊಂದನ್ನು ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಕೂಡಾ ಪ್ರಮುಖ ಪಾತ್ರವೊಂದನ್ನು ಮಾಡಲಿದ್ದಾರಂತೆ.

ಸದ್ಯಕ್ಕೆ ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮುಂದಿನ ವರ್ಷ ಅಂದರೆ 2024 ರ ಕೊನೆಗೆ ಚಿತ್ರ ಸೆಟ್ಟೇರುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ