ತೆಲುಗಿನಲ್ಲೂ ಬಿಡುಗಡೆಯಾಗಲಿದೆ ದರ್ಶನ್ ಅಭಿನಯದ ರಾಬರ್ಟ್

ಶನಿವಾರ, 22 ಫೆಬ್ರವರಿ 2020 (08:55 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಟೀಸರ್ ಬಿಡುಗಡೆಯಾಗಿ ಎಲ್ಲೆಡೆ ಸದ್ದು ಮಾಡುತ್ತಿದೆ. ಇದೀಗ ಈ ಸಿನಿಮಾ ಕೇವಲ ಕನ್ನಡದಲ್ಲಿ ಮಾತ್ರವಲ್ಲದೆ ತೆಲುಗಿನಲ್ಲೂ ಬಿಡುಗಡೆಯಾಗಲಿದೆ ಎಂಬ ಸುದ್ದಿ ಬಂದಿದೆ.


ಈ ಹಿಂದೆ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ ಬೇರೆ ಭಾಷೆಗಳಲ್ಲೂ ಬಿಡುಗಡೆಯಾಗಿತ್ತು. ಇದೀಗ ರಾಬರ್ಟ್ ಕೂಡಾ ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

ಈಗಾಗಲೇ ಟೀಸರ್ ಹೊರಬಂದಿದ್ದು, ಏಪ್ರಿಲ್ ವೇಳೆಗೆ ಚಿತ್ರ ಬಿಡುಗಡೆಯಾಗಲಿದೆ ಎಂದು ದರ್ಶನ್ ಹಾಗೂ ಚಿತ್ರತಂಡ ಈಗಾಗಲೇ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ