Yash birthday: ಯಶ್ ಹುಟ್ಟುಹಬ್ಬಕ್ಕೆ ‘ಟಾಕ್ಸಿಕ್’ ಉಡುಗೊರೆಯ ನಿರೀಕ್ಷೆಯಲ್ಲಿ ಫ್ಯಾನ್ಸ್

Krishnaveni K

ಸೋಮವಾರ, 8 ಜನವರಿ 2024 (08:30 IST)
Photo Courtesy: Twitter
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಗೆ ಇಂದು 38 ನೇ ಜನ್ಮದಿನಕ್ಕೆ ಕಾಲಿಡುತ್ತಿದ್ದಾರೆ. ಅವರ ಹುಟ್ಟುಬ್ಬಕ್ಕೆ ಅಭಿಮಾನಿಗಳು ಟಾಕ್ಸಿಕ್ ಸಿನಿಮಾ ಕಡೆಯಿಂದ ಉಡುಗೊರೆ ನಿರೀಕ್ಷೆಯಲ್ಲಿದ್ದಾರೆ.

ಯಶ್ ಇತ್ತೀಚೆಗಷ್ಟೇ ಟಾಕ್ಸಿಕ್ ಸಿನಿಮಾ ಘೋಷಣೆ ಮಾಡಿದ್ದರು. ಚಿತ್ರ ತಂಡ ಇಂದು ಫಸ್ಟ್ ಲುಕ್ ಬಿಡುಗಡೆ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

ಇತ್ತೀಚೆಗಷ್ಟೇ ಅಭಿಮಾನಿಗಳಿಗೆ ಪತ್ರ ಬರೆದಿದ್ದ ಯಶ್, ಟಾಕ್ಸಿಕ್ ಸಿನಿಮಾ ಶೂಟಿಂಗ್ ನಿಂದಾಗಿ ಈ ಬಾರಿಯೂ ನಿಮ್ಮನ್ನು ಖುದ್ದಾಗಿ ಭೇಟಿ ಮಾಡಲಾಗುತ್ತಿಲ್ಲ. ವಿದೇಶಕ್ಕೆ ತೆರಳುತ್ತಿದ್ದೇನೆ ಎಂದಿದ್ದರು. ಹೀಗಾಗಿ ನೇರವಾಗಿ ತಮ್ಮ ನೆಚ್ಚಿನ ನಟನನ್ನು ಭೇಟಿಯಾಗುವ ಅವಕಾಶ ಅಭಿಮಾನಿಗಳಿಗೆ ಮಿಸ್ ಆಗಿದೆ.

ಆ ನಿರಾಸೆ ಮರೆಸಲು ಟಾಕ್ಸಿಕ್ ಸಿನಿಮಾ ಕಡೆಯಿಂದ ಉಡುಗೊರೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಫ್ಯಾನ್ಸ್ ಇದ್ದಾರೆ. ಈ ಬಾರಿಯೂ ಯಶ್ ಹುಟ್ಟುಹಬ್ಬವನ್ನು ವಿದೇಶದಲ್ಲಿಯೇ ಆಚರಿಸಿಕೊಳ್ಳುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ