ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೇ ಸಿನಿಮಾ ಸೆಲೆಬ್ರಿಟಿಗಳು ರಾಜಕೀಯ ಪಕ್ಷ ಸೇರುವುದು, ಪ್ರಚಾರ ಮಾಡುವುದು ಸಾಮಾನ್ಯ. ಇದೀಗ ರಾಕಿಂಗ್ ಸ್ಟಾರ್ ಯಶ್ ತಮ್ಮ ರಾಜಕೀಯ ಎಂಟ್ರಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಬಾರಿ ಲೋಕಸಭೆ ಚುನಾವನೆಯಲ್ಲಿ ಯಶ್ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಈ ಬಾರಿಯೂ ಯಶ್ ಚುನಾವಣೆ ಪ್ರಚಾರಕ್ಕೆ ಬರುತ್ತಾರಾ ಎಂದು ಇತ್ತೀಚೆಗೆ ಸುಮಲತಾಗೆ ಮಾಧ್ಯಮಗಳು ಪ್ರಶ್ನೆ ಮಾಡಿದ್ದರು. ಆಗ ನಾನಿನ್ನೂ ಯಶ್ ಜೊತೆ ಮಾತುಕತೆ ನಡೆಸಿಲ್ಲ ಎಂದು ಸುಮಲತಾ ಹೇಳಿದ್ದರು.
ಇದೀಗ ಬಳ್ಳಾರಿಗೆ ಭೇಟಿ ನೀಡಿದ್ದ ಯಶ್ ಗೆ ಮಾಧ‍್ಯಮಗಳು ಮತ್ತೆ ರಾಜಕೀಯ ಎಂಟ್ರಿ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯಾವ ರಾಜಕೀಯ ಪಕ್ಷದ ಪರ ಕೆಲಸ ಮಾಡುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಯಶ್, ನಾನು ರಾಜಕೀಯಕ್ಕೆ ಬರಲ್ಲ. ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ ಎಂದಿದ್ದಾರೆ. ಈ ಮೂಲಕ ಚುನಾವಣಾ ಪ್ರಚಾರದಲ್ಲಿ ಈ ಬಾರಿ ತೊಡಗಿಸಿಕೊಳ್ಳುವುದಿಲ್ಲ ಎಂದು ಸಂದೇಶ ನೀಡಿದ್ದಾರೆ.
ಯಶ್ ಈಗಾಗಲೇ ತಮ್ಮ ಟಾಕ್ಸಿಕ್ ಮೂವಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾವನ್ನು ಪ್ಯಾನ್ ಇಂಟರ್ ನ್ಯಾಷನಲ್ ಲೆವೆಲ್ ನಲ್ಲಿ ಹೊರತರಲು ಯೋಜನೆ ರೂಪಿಸಲಾಗಿದೆ. ಹೀಗಾಗಿ ಯಶ್ ಸದ್ಯಕ್ಕೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದು, ರಾಜಕೀಯಕ್ಕೆ ಎಂಟ್ರಿ ಕೊಡುವ ಸಾಧ‍್ಯತೆಯಿಲ್ಲ ಎನ್ನುವುದು ಸ್ಪಷ್ಟವಾಗಿದೆ.