ಸಂಕಷ್ಟದಲ್ಲಿರುವ ಸಿನಿಮಂದಿಗೆ ರಾಕಿಂಗ್ ಸ್ಟಾರ್ ಯಶ್ ನೆರವು
ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ. ಈ ಸಣ್ಣ ಸಹಾಯ ಪರಿಹಾರ ಎಂಬುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತರೆ ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎಂಬುದು ನನ್ನ ಆಶಯ ಎಂದು ಯಶ್ ಹೇಳಿದ್ದಾರೆ.