ಹೈದರಾಬಾದ್ ತಲುಪಿದ ರಾಕಿಂಗ್ ಸ್ಟಾರ್ ಯಶ್

ಗುರುವಾರ, 22 ಅಕ್ಟೋಬರ್ 2020 (09:31 IST)
ಬೆಂಗಳೂರು: ಕೆಜಿಎಫ್ 2 ಅಂತಿಮ ಹಂತದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ರಾಕಿಂಗ್ ಸ್ಟಾರ್ ಯಶ್ ಇದೀಗ ಹೈದರಾಬಾದ್ ಗೆ ಬಂದಿಳಿದಿದ್ದಾರೆ.


ಕೆಜಿಎಫ್ 2 ಅಂತಿಮ ಹಂತದ ಚಿತ್ರೀಕರಣವನ್ನು ಮಂಗಳೂರು, ಹೈದರಾಬಾದ್ ಮತ್ತು ಬೆಂಗಳೂರಿನ ವಿವಿಧ ಲೊಕೇಷನ್ ಗಳಲ್ಲಿ ಚಿತ್ರೀಕರಿಸುತ್ತಿರುವುದಾಗಿ ಚಿತ್ರತಂಡ ಹೇಳಿದೆ. ಈಗಾಗಲೇ ಕಡಲನಗರಿ ಮಂಗಳೂರಿನಲ್ಲಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮುಂದಿನ ಶೆಡ್ಯೂಲ್ ಹೈದರಾಬಾದ್ ನಲ್ಲಿ ಶೂಟಿಂಗ್ ನಡೆಸಲಿದೆ. ಇದಕ್ಕಾಗಿ ರಾಕಿ ಭಾಯ್ ಹೈದರಾಬಾದ್ ಗೆ ಬಂದಿಳಿದಿದ್ದಾರೆ. ಇಲ್ಲಿಯೇ ಸಂಜಯ್ ದತ್ ಕೂಡಾ ಚಿತ್ರತಂಡ ಕೂಡಿಕೊಳ್ಳುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ