ದಸರಾಗೆ ರಾಕಿಂಗ್ ಸ್ಟಾರ್ ಯಶ್ ಗುಡ್ ನ್ಯೂಸ್

ಗುರುವಾರ, 30 ಸೆಪ್ಟಂಬರ್ 2021 (09:33 IST)
ಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ.


ಇದೇ ದಸರಾಗೆ ರಾಕಿಂಗ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಕಾದಿದೆ ಎನ್ನಲಾಗಿದೆ. ದಸರಾ ಹಬ್ಬದ ಸಂದರ್ಭದಲ್ಲೇ ಯಶ್ 19 ನೇ ಸಿನಿಮಾ ಬಗ್ಗೆ ಘೋಷಣೆ ಹೊರಬೀಳಲಿದೆ ಎನ್ನಲಾಗಿದೆ.

ಈಗಾಗಲೇ ಯಶ್ ಜಾಹೀರಾತು ಚಿತ್ರೀಕರಣ ನೆಪದಲ್ಲಿ ಮುಂಬೈಗೆ ಹೋಗಿ ಬಂದಿದ್ದಾರೆ. ಅಲ್ಲಿ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದೂ ಕೂಡಾ ಪ್ಯಾನ್ ಇಂಡಿಯಾ ಸಿನಿಮಾಗಿರಲಿದೆ.ಸದ್ಯದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ