ಎರಡು ವರ್ಷಗಳ ಬಳಿಕ ಶೂಟಿಂಗ್ ನಲ್ಲಿ ಭಾಗಿಯಾದ ರಾಕಿಂಗ್ ಸ್ಟಾರ್ ಯಶ್
ಕೆಜಿಎಫ್ 2 ಬಳಿಕ ಯಶ್ ಎರಡು ವರ್ಷ ಬ್ರೇಕ್ ತೆಗೆದುಕೊಂಡಿದ್ದಾರೆ. ಅಳೆದು ತೂಗಿ ಟಾಕ್ಸಿಕ್ ಎನ್ನುವ ಅದ್ಧೂರಿ ವೆಚ್ಚದ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆವಿಎನ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಈ ಸಿನಿಮಾ ಸೆಟ್ಟೇರಿದೆ. ಇಂದಿನಿಂದ ಶೂಟಿಂಗ್ ಆರಂಭವಾಗಿದೆ.
ಟಾಕ್ಸಿಕ್ ಸಿನಿಮಾ ಕೆಲಸಗಳು ಆರಂಭವಾಗಿ ಒಂದೂವರೆ ವರ್ಷವಾಗಿದೆ. ಇದೀಗ ಯಶ್ ಲಕ್ಕಿ ನಂಬರ್ 8 ರಂದೇ ಶೂಟಿಂಗ್ ಆರಂಭವಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಬರೆದಿರುವ ಯಶ್ ಪಯಣ ಶುರುವಾಗಿದೆ ಎಂದು ನಿರ್ಮಾಪಕರೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ.
ಟಾಕ್ಸಿಕ್ ಸಿನಿಮಾ ಶೂಟಿಂಗ್ ಆರಂಭಕ್ಕೆ ಮುನ್ನ ಯಶ್ ತಾವು ನಂಬುವ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದರು. ಈ ಸಿನಿಮಾ ಪ್ಯಾನ್ ಇಂಟರ್ ನ್ಯಾಷನಲ್ ಲೆವೆಲ್ ನಲ್ಲಿ ಬರುತ್ತಿದೆ. ಮಲಯಾಳಂ ಮೂಲದ ಗೀತು ಮೋಹನ್ ದಾಸ್ ನಿರ್ದೇಶನ ಮಾಡುತ್ತಿದ್ದಾರೆ.