ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಮೊದಲು ಧರ್ಮಸ್ಥಳಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್
ಧರ್ಮಸ್ಥಳಕ್ಕೆ ಭೇಟಿ ನೀಡಿದ ಯಶ್, ಚಿತ್ರದ ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಸಾಂಪ್ರದಾಯಿಕ ಉಡುಪಿನಲ್ಲಿ ಯಶ್ ಮಿಂಚುತ್ತಿದ್ದರು.
ಇನ್ನು, ತಮ್ಮ ನೆಚ್ಚಿನ ನಟನನ್ನು ಕಾಣಲು ಅಭಿಮಾನಿಗಳ ದಂಡೇ ನೆರೆದಿತ್ತು. ಎಲ್ಲರತ್ತ ಕೈ ಬೀಸಿ ಯಶ್ ಕಾರಿನಲ್ಲಿ ತೆರಳಿದರು.